Home Bibles ಎಸ್ತೇರ್ 8:5 · ಕನ್ನಡ ಬೈಬಲ್
ಎಸ್ತೇರ್ 8:5 · ಕನ್ನಡ ಬೈಬಲ್

ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.

Cross references

ನಿರ್ಗಮಕಾಂಡ 33:13

ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.

ನಿರ್ಗಮಕಾಂಡ 33:16

ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

1 ಸಮುವೇಲ 20:29

ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.

ಎಸ್ತೇರ್ 2:4

ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.

ಎಸ್ತೇರ್ 2:17

ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.

ಎಸ್ತೇರ್ 3:12

ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.

ಎಸ್ತೇರ್ 3:13

ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.

ಎಸ್ತೇರ್ 5:8

ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.

ಎಸ್ತೇರ್ 7:3

ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.

Interlinear

Choose Theme