ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
Cross references
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.