Home Bibles ನಿರ್ಗಮಕಾಂಡ 10:15 · ಕನ್ನಡ ಬೈಬಲ್
ನಿರ್ಗಮಕಾಂಡ 10:15 · ಕನ್ನಡ ಬೈಬಲ್

ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

Cross references

ನಿರ್ಗಮಕಾಂಡ 10:5

ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.

ಅಂಕೆಗಳ ಪುಸ್ತಕ 22:5

ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

ಕೀರ್ತನೆಗಳು 78:46

ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು

ಕೀರ್ತನೆಗಳು 105:34

ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,

ಕೀರ್ತನೆಗಳು 105:35

ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.

ಸಾಮೇತಿಗಳು 30:27

ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.

ಯೋವೇಲ 1:4

ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

ಯೋವೇಲ 1:6

ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.

ಯೋವೇಲ 2:1

ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.

ಯೋವೇಲ 2:25

ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

Interlinear

Choose Theme