Home Bibles ನಿರ್ಗಮಕಾಂಡ 12:2 · ಕನ್ನಡ ಬೈಬಲ್
ನಿರ್ಗಮಕಾಂಡ 12:2 · ಕನ್ನಡ ಬೈಬಲ್

ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.

Cross references

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ನಿರ್ಗಮಕಾಂಡ 13:4

ಅಬೀಬ್‌ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.

ನಿರ್ಗಮಕಾಂಡ 23:15

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)

ನಿರ್ಗಮಕಾಂಡ 34:18

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್‌ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್‌ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

ನಿರ್ಗಮಕಾಂಡ 40:17

ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

ಲೇವ್ಯಕಾಂಡ 23:5

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.

ಅಂಕೆಗಳ ಪುಸ್ತಕ 28:16

ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.

ದ್ವಿತೀಯೋಪದೇಶಕಾಂಡ 16:1

ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;

ಎಸ್ತೇರ್ 3:7

ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.

ಯೆಹೆಜ್ಕೇಲ 45:21

ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.

Interlinear

Choose Theme