Home Bibles ನಿರ್ಗಮಕಾಂಡ 12:22 · ಕನ್ನಡ ಬೈಬಲ್
ನಿರ್ಗಮಕಾಂಡ 12:22 · ಕನ್ನಡ ಬೈಬಲ್

ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.

Cross references

ನಿರ್ಗಮಕಾಂಡ 12:7

ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.

ಲೇವ್ಯಕಾಂಡ 14:6

ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ

ಅಂಕೆಗಳ ಪುಸ್ತಕ 19:18

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

ಯೆಹೋಶುವ 2:19

ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

ಯೆಶಾಯ 26:20

ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಮತ್ತಾಯ 26:30

ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.

ಹೆಬ್ರಿಯರಿಗೆ 9:1

ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.

ಹೆಬ್ರಿಯರಿಗೆ 9:14

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

ಹೆಬ್ರಿಯರಿಗೆ 9:19

ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--

ಹೆಬ್ರಿಯರಿಗೆ 11:28

ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

ಹೆಬ್ರಿಯರಿಗೆ 12:24

ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Interlinear

Choose Theme