Home Bibles ನಿರ್ಗಮಕಾಂಡ 12:28 · ಕನ್ನಡ ಬೈಬಲ್
ನಿರ್ಗಮಕಾಂಡ 12:28 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

Cross references

ನಿರ್ಗಮಕಾಂಡ 7:6

ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.

ನಿರ್ಗಮಕಾಂಡ 7:10

ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

ನಿರ್ಗಮಕಾಂಡ 12:35

ಮೋಶೆಯು ಹೇಳಿದಂತೆ ಇಸ್ರಾ ಯೇಲ್‌ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.

ನಿರ್ಗಮಕಾಂಡ 14:4

ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.

ನಿರ್ಗಮಕಾಂಡ 36:1

ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.

ನಿರ್ಗಮಕಾಂಡ 39:32

ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.

ನಿರ್ಗಮಕಾಂಡ 39:42

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ನಿರ್ಗಮಕಾಂಡ 39:43

ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ಲೇವ್ಯಕಾಂಡ 24:23

ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.

ಅಂಕೆಗಳ ಪುಸ್ತಕ 1:54

ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಅಂಕೆಗಳ ಪುಸ್ತಕ 5:4

ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.

ಅಂಕೆಗಳ ಪುಸ್ತಕ 31:31

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.

ಅಂಕೆಗಳ ಪುಸ್ತಕ 31:41

ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.

ಅಂಕೆಗಳ ಪುಸ್ತಕ 31:47

ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.

ದ್ವಿತೀಯೋಪದೇಶಕಾಂಡ 34:9

ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.

ಯೆಹೋಶುವ 2:21

ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.

ಯೆಹೋಶುವ 4:8

ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.

ಯೆಹೋಶುವ 14:5

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

2 ಸಮುವೇಲ 5:25

ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.

1 ಅರಸುಗಳು 17:5

ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್‌ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.

ಹೆಬ್ರಿಯರಿಗೆ 11:28

ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

Interlinear

Choose Theme