Home Bibles ನಿರ್ಗಮಕಾಂಡ 12:31 · ಕನ್ನಡ ಬೈಬಲ್
ನಿರ್ಗಮಕಾಂಡ 12:31 · ಕನ್ನಡ ಬೈಬಲ್

ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.

Cross references

ನಿರ್ಗಮಕಾಂಡ 3:19

ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

ನಿರ್ಗಮಕಾಂಡ 3:20

ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.

ನಿರ್ಗಮಕಾಂಡ 6:1

ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.

ನಿರ್ಗಮಕಾಂಡ 8:8

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ನಿರ್ಗಮಕಾಂಡ 10:9

ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.

ನಿರ್ಗಮಕಾಂಡ 10:29

ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.

ನಿರ್ಗಮಕಾಂಡ 11:8

ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.

1 ಸಮುವೇಲ 6:6

ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?

ಕೀರ್ತನೆಗಳು 105:38

ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.

Interlinear

Choose Theme