ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
Cross references
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.