Home Bibles ನಿರ್ಗಮಕಾಂಡ 12:6 · ಕನ್ನಡ ಬೈಬಲ್
ನಿರ್ಗಮಕಾಂಡ 12:6 · ಕನ್ನಡ ಬೈಬಲ್

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

Cross references

ನಿರ್ಗಮಕಾಂಡ 12:18

ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

ನಿರ್ಗಮಕಾಂಡ 16:12

ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.

ನಿರ್ಗಮಕಾಂಡ 29:39

ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.

ನಿರ್ಗಮಕಾಂಡ 29:41

ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.

ಲೇವ್ಯಕಾಂಡ 23:5

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.

ಅಂಕೆಗಳ ಪುಸ್ತಕ 9:1

ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ

ಅಂಕೆಗಳ ಪುಸ್ತಕ 9:11

ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.

ಅಂಕೆಗಳ ಪುಸ್ತಕ 28:16

ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.

ಅಂಕೆಗಳ ಪುಸ್ತಕ 28:18

ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.

ದ್ವಿತೀಯೋಪದೇಶಕಾಂಡ 16:1

ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;

ದ್ವಿತೀಯೋಪದೇಶಕಾಂಡ 16:6

ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.

ಯೆಹೋಶುವ 5:10

ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.

2 ದಿನವೃತ್ತಾಂತ 30:15

ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.

2 ದಿನವೃತ್ತಾಂತ 35:1

ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.

ಎಜ್ರಾ 6:19

ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಯೆಹೆಜ್ಕೇಲ 45:21

ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.

ಮತ್ತಾಯ 27:20

ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಮತ್ತಾಯ 27:46

ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಮಾರ್ಕ 15:1

ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಮಾರ್ಕ 15:8

ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.

ಮಾರ್ಕ 15:11

ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.

ಮಾರ್ಕ 15:25

ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.

ಮಾರ್ಕ 15:33

ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

ಲೂಕ 23:1

ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

ಲೂಕ 23:18

ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:14

ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ಅಪೋಸ್ತಲರ ಕೃತ್ಯಗಳು 4:27

ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

Interlinear

Choose Theme