Home Bibles ನಿರ್ಗಮಕಾಂಡ 13:19 · ಕನ್ನಡ ಬೈಬಲ್
ನಿರ್ಗಮಕಾಂಡ 13:19 · ಕನ್ನಡ ಬೈಬಲ್

ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.

Cross references

ಆದಿಕಾಂಡ 48:21

ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.

ಆದಿಕಾಂಡ 50:24

ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

ಆದಿಕಾಂಡ 50:25

ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

ನಿರ್ಗಮಕಾಂಡ 4:31

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಯೆಹೋಶುವ 24:32

ಇದ ಲ್ಲದೆ ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್‌ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.

ಲೂಕ 1:58

ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.

ಲೂಕ 7:16

ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.

ಅಪೋಸ್ತಲರ ಕೃತ್ಯಗಳು 7:16

ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.

Interlinear

Choose Theme