ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
Cross references
ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ