Cross references
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;