ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
Cross references
ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.