Home Bibles ನಿರ್ಗಮಕಾಂಡ 14:13 · ಕನ್ನಡ ಬೈಬಲ್
ನಿರ್ಗಮಕಾಂಡ 14:13 · ಕನ್ನಡ ಬೈಬಲ್

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

Cross references

ಆದಿಕಾಂಡ 15:1

ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ಆದಿಕಾಂಡ 26:24

ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.

ಆದಿಕಾಂಡ 49:18

ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.

ನಿರ್ಗಮಕಾಂಡ 14:30

ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ನಿರ್ಗಮಕಾಂಡ 15:1

ಆಗ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.

ಅಂಕೆಗಳ ಪುಸ್ತಕ 14:9

ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

ದ್ವಿತೀಯೋಪದೇಶಕಾಂಡ 20:3

ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;

2 ಅರಸುಗಳು 6:16

ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.

1 ದಿನವೃತ್ತಾಂತ 11:14

ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.

2 ದಿನವೃತ್ತಾಂತ 20:15

ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

2 ದಿನವೃತ್ತಾಂತ 20:17

ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.

ನೆಹೆಮ್ಯ 9:9

ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.

ಕೀರ್ತನೆಗಳು 3:8

ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.

ಕೀರ್ತನೆಗಳು 27:1

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

ಕೀರ್ತನೆಗಳು 46:1

ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ಕೀರ್ತನೆಗಳು 68:21

ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.

ಕೀರ್ತನೆಗಳು 78:53

ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.

ಕೀರ್ತನೆಗಳು 91:8

ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.

ಯೆಶಾಯ 26:3

ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಯೆಶಾಯ 30:15

ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

ಯೆಶಾಯ 35:4

ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 43:11

ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ಯೆರೆಮಿಯ 3:23

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.

ವಿಲಾಪಗಳು 3:26

ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.

ಹೊಶೇಯ 1:7

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

ಹೊಶೇಯ 13:4

ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.

ಹೊಶೇಯ 13:9

ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.

ಹಬಕ್ಕೂಕ 3:8

ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?

ಹಬಕ್ಕೂಕ 3:13

ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.

ಮತ್ತಾಯ 28:5

ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.

Interlinear

Choose Theme