Home Bibles ನಿರ್ಗಮಕಾಂಡ 14:16 · ಕನ್ನಡ ಬೈಬಲ್
ನಿರ್ಗಮಕಾಂಡ 14:16 · ಕನ್ನಡ ಬೈಬಲ್

ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.

Cross references

ನಿರ್ಗಮಕಾಂಡ 4:2

ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.

ನಿರ್ಗಮಕಾಂಡ 4:17

ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.

ನಿರ್ಗಮಕಾಂಡ 4:20

ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.

ನಿರ್ಗಮಕಾಂಡ 7:9

ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

ನಿರ್ಗಮಕಾಂಡ 7:19

ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.

ನಿರ್ಗಮಕಾಂಡ 14:21

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.

ನಿರ್ಗಮಕಾಂಡ 14:26

ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.

ಅಂಕೆಗಳ ಪುಸ್ತಕ 20:8

ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.

ಅಂಕೆಗಳ ಪುಸ್ತಕ 20:11

ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.

ಯೆಶಾಯ 10:26

ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

Interlinear

Choose Theme