Home Bibles ನಿರ್ಗಮಕಾಂಡ 14:8 · ಕನ್ನಡ ಬೈಬಲ್
ನಿರ್ಗಮಕಾಂಡ 14:8 · ಕನ್ನಡ ಬೈಬಲ್

ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.

Cross references

ನಿರ್ಗಮಕಾಂಡ 4:21

ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.

ನಿರ್ಗಮಕಾಂಡ 6:1

ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.

ನಿರ್ಗಮಕಾಂಡ 13:9

ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 13:16

ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 13:18

ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.

ನಿರ್ಗಮಕಾಂಡ 14:4

ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.

ಲೇವ್ಯಕಾಂಡ 26:13

ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.

ಅಂಕೆಗಳ ಪುಸ್ತಕ 33:3

ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್‌ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.

ದ್ವಿತೀಯೋಪದೇಶಕಾಂಡ 26:8

ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ

ದ್ವಿತೀಯೋಪದೇಶಕಾಂಡ 32:27

ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.

ಯೆಹೋಶುವ 11:20

ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

ನ್ಯಾಯಾಧಿಪತಿಗಳು 4:7

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.

ಕೀರ್ತನೆಗಳು 86:13

ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.

ಕೀರ್ತನೆಗಳು 105:43

ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,

ಅಪೋಸ್ತಲರ ಕೃತ್ಯಗಳು 13:17

ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

Interlinear

Choose Theme