Home Bibles ☰ Books ನಿರ್ಗಮಕಾಂಡ 15:18 · ಕನ್ನಡ ಬೈಬಲ್
ನಿರ್ಗಮಕಾಂಡ 15:18 · ಕನ್ನಡ ಬೈಬಲ್

ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.

Cross references

ದ್ವಿತೀಯೋಪದೇಶಕಾಂಡ 33:5

ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.

ಕೀರ್ತನೆಗಳು 9:8

ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.

ಕೀರ್ತನೆಗಳು 10:16

ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.

ಕೀರ್ತನೆಗಳು 29:10

ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಕೀರ್ತನೆಗಳು 146:10

ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.

ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 4:3

ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.

ದಾನಿಯೇಲ 7:14

ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

ದಾನಿಯೇಲ 7:27

ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

Interlinear

Choose Theme