Home Bibles ನಿರ್ಗಮಕಾಂಡ 16:21 · ಕನ್ನಡ ಬೈಬಲ್
ನಿರ್ಗಮಕಾಂಡ 16:21 · ಕನ್ನಡ ಬೈಬಲ್

ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.

Cross references

ಸಾಮೇತಿಗಳು 6:6

ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಸಭಾಪ್ರಸಂಗಿ 12:1

ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಯೋಹಾನ 12:35

ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

2 ಕೊರಿಂಥದವರಿಗೆ 6:2

(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).

Interlinear

Choose Theme