ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
Cross references
ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.