Home Bibles ನಿರ್ಗಮಕಾಂಡ 16:35 · ಕನ್ನಡ ಬೈಬಲ್
ನಿರ್ಗಮಕಾಂಡ 16:35 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.

Cross references

ಅಂಕೆಗಳ ಪುಸ್ತಕ 32:13

ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.

ಅಂಕೆಗಳ ಪುಸ್ತಕ 33:38

ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್‌ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.

ಅಂಕೆಗಳ ಪುಸ್ತಕ 33:48

ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.

ದ್ವಿತೀಯೋಪದೇಶಕಾಂಡ 1:8

ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 2:7

ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 8:2

ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 8:4

ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.

ದ್ವಿತೀಯೋಪದೇಶಕಾಂಡ 29:4

ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.

ದ್ವಿತೀಯೋಪದೇಶಕಾಂಡ 34:1

ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ

ಯೆಹೋಶುವ 5:12

ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್‌ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್‌ ದೇಶದ ಫಲವನ್ನು ತಿಂದರು.

ನೆಹೆಮ್ಯ 9:15

ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.

ನೆಹೆಮ್ಯ 9:20

ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.

ಕೀರ್ತನೆಗಳು 78:24

ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.

ಯೋಹಾನ 6:30

ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?

Interlinear

Choose Theme