Home Bibles ನಿರ್ಗಮಕಾಂಡ 17:13 · ಕನ್ನಡ ಬೈಬಲ್
ನಿರ್ಗಮಕಾಂಡ 17:13 · ಕನ್ನಡ ಬೈಬಲ್

ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.

Cross references

ಯೆಹೋಶುವ 8:26

ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.

ಯೆಹೋಶುವ 10:28

ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.

ಯೆಹೋಶುವ 10:32

ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.

ಯೆಹೋಶುವ 10:37

ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.

ಯೆಹೋಶುವ 10:42

ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.

ಯೆಹೋಶುವ 11:12

ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.

Interlinear

Choose Theme