ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
Cross references
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.