ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Cross references
ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.