Home Bibles ನಿರ್ಗಮಕಾಂಡ 19:13 · ಕನ್ನಡ ಬೈಬಲ್
ನಿರ್ಗಮಕಾಂಡ 19:13 · ಕನ್ನಡ ಬೈಬಲ್

ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.

Cross references

ನಿರ್ಗಮಕಾಂಡ 19:16

ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

ನಿರ್ಗಮಕಾಂಡ 19:19

ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.

ನಿರ್ಗಮಕಾಂಡ 21:28

ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

ನಿರ್ಗಮಕಾಂಡ 34:3

ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.

ಲೇವ್ಯಕಾಂಡ 20:15

ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.

ನ್ಯಾಯಾಧಿಪತಿಗಳು 20:37

ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.

1 ಕೊರಿಂಥದವರಿಗೆ 15:52

ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

1 ತೆಸಲೋನಿಕದವರಿಗೆ 4:16

ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

ಹೆಬ್ರಿಯರಿಗೆ 12:20

(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.

Interlinear

Choose Theme