ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
Cross references
ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.