Home Bibles ನಿರ್ಗಮಕಾಂಡ 20:16 · ಕನ್ನಡ ಬೈಬಲ್
ನಿರ್ಗಮಕಾಂಡ 20:16 · ಕನ್ನಡ ಬೈಬಲ್

ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.

Cross references

ನಿರ್ಗಮಕಾಂಡ 23:1

ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ಲೇವ್ಯಕಾಂಡ 19:11

ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.

ಲೇವ್ಯಕಾಂಡ 19:16

ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.

ದ್ವಿತೀಯೋಪದೇಶಕಾಂಡ 19:15

ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.

1 ಸಮುವೇಲ 22:8

ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.

1 ಅರಸುಗಳು 21:10

ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.

ಕೀರ್ತನೆಗಳು 15:3

ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;

ಕೀರ್ತನೆಗಳು 101:5

ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.

ಸಾಮೇತಿಗಳು 10:18

ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.

ಸಾಮೇತಿಗಳು 11:13

ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.

ಸಾಮೇತಿಗಳು 19:5

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

ಮತ್ತಾಯ 19:18

ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.

ಮತ್ತಾಯ 26:59

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಅಪೋಸ್ತಲರ ಕೃತ್ಯಗಳು 6:13

ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

ಎಫೆಸದವರಿಗೆ 4:31

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

1 ತಿಮೋಥೆಯ 1:10

ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.

2 ತಿಮೋಥೆಯ 3:3

ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ

ಯಾಕೋಬ 4:11

ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ

Interlinear

Choose Theme