Home Bibles ☰ Books ನಿರ್ಗಮಕಾಂಡ 20:19 · ಕನ್ನಡ ಬೈಬಲ್
ನಿರ್ಗಮಕಾಂಡ 20:19 · ಕನ್ನಡ ಬೈಬಲ್

ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.

Cross references

ಆದಿಕಾಂಡ 32:30

ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.

ನಿರ್ಗಮಕಾಂಡ 33:20

ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.

ದ್ವಿತೀಯೋಪದೇಶಕಾಂಡ 5:5

(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 5:23

(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)

ದ್ವಿತೀಯೋಪದೇಶಕಾಂಡ 18:16

ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.

ಅಪೋಸ್ತಲರ ಕೃತ್ಯಗಳು 7:38

ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಗಲಾತ್ಯದವರಿಗೆ 3:19

ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಹೆಬ್ರಿಯರಿಗೆ 12:19

ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;

Interlinear

Choose Theme