Home Bibles ನಿರ್ಗಮಕಾಂಡ 20:25 · ಕನ್ನಡ ಬೈಬಲ್
ನಿರ್ಗಮಕಾಂಡ 20:25 · ಕನ್ನಡ ಬೈಬಲ್

ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.

Cross references

ನಿರ್ಗಮಕಾಂಡ 24:4

ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ದ್ವಿತೀಯೋಪದೇಶಕಾಂಡ 27:5

ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.

ಯೆಹೋಶುವ 8:31

ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

Interlinear

Choose Theme