ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
Cross references
ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,