Home Bibles ನಿರ್ಗಮಕಾಂಡ 21:34 · ಕನ್ನಡ ಬೈಬಲ್
ನಿರ್ಗಮಕಾಂಡ 21:34 · ಕನ್ನಡ ಬೈಬಲ್

ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

Cross references

ನಿರ್ಗಮಕಾಂಡ 21:29

ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.

ನಿರ್ಗಮಕಾಂಡ 22:3

ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.

ನಿರ್ಗಮಕಾಂಡ 22:6

ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.

ನಿರ್ಗಮಕಾಂಡ 22:14

ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.

2 ಸಮುವೇಲ 12:6

ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

ಸಾಮೇತಿಗಳು 6:31

ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.

ಯೆಹೆಜ್ಕೇಲ 33:15

ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.

Interlinear

Choose Theme