ನಿರ್ಗಮಕಾಂಡ 21:35 · ಕನ್ನಡ ಬೈಬಲ್
ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.