ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.