ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
Cross references
ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.