Home Bibles ನಿರ್ಗಮಕಾಂಡ 23:8 · ಕನ್ನಡ ಬೈಬಲ್
ನಿರ್ಗಮಕಾಂಡ 23:8 · ಕನ್ನಡ ಬೈಬಲ್

ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.

Cross references

ದ್ವಿತೀಯೋಪದೇಶಕಾಂಡ 10:17

ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.

ದ್ವಿತೀಯೋಪದೇಶಕಾಂಡ 16:19

ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.

1 ಸಮುವೇಲ 8:3

ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.

1 ಸಮುವೇಲ 12:3

ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.

ಕೀರ್ತನೆಗಳು 26:10

ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.

ಸಾಮೇತಿಗಳು 15:27

ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.

ಸಾಮೇತಿಗಳು 17:8

ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.

ಸಾಮೇತಿಗಳು 17:23

ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.

ಸಾಮೇತಿಗಳು 19:4

ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.

ಸಭಾಪ್ರಸಂಗಿ 7:7

ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.

ಯೆಶಾಯ 1:13

ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.

ಯೆಶಾಯ 5:23

ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಯೆಹೆಜ್ಕೇಲ 22:12

ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

ಹೊಶೇಯ 4:18

ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.

ಆಮೋಸ 5:12

ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.

ಮೀಕ 7:3

ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.

Interlinear

Choose Theme