Home Bibles ☰ Books ನಿರ್ಗಮಕಾಂಡ 23:9 · ಕನ್ನಡ ಬೈಬಲ್
ನಿರ್ಗಮಕಾಂಡ 23:9 · ಕನ್ನಡ ಬೈಬಲ್

ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.

Cross references

ನಿರ್ಗಮಕಾಂಡ 21:21

ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.

ನಿರ್ಗಮಕಾಂಡ 22:20

ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.

ನಿರ್ಗಮಕಾಂಡ 22:21

ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.

ದ್ವಿತೀಯೋಪದೇಶಕಾಂಡ 10:19

ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.

ದ್ವಿತೀಯೋಪದೇಶಕಾಂಡ 24:14

ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.

ದ್ವಿತೀಯೋಪದೇಶಕಾಂಡ 27:19

ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ಕೀರ್ತನೆಗಳು 94:6

ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.

ಯೆಹೆಜ್ಕೇಲ 22:7

ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.

ಯೆಹೆಜ್ಕೇಲ 22:29

ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.

ಮತ್ತಾಯ 18:33

ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.

ಹೆಬ್ರಿಯರಿಗೆ 2:17

ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

Interlinear

Choose Theme