ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
Cross references
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ?
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.