ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
Cross references
ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;