Home Bibles ನಿರ್ಗಮಕಾಂಡ 24:16 · ಕನ್ನಡ ಬೈಬಲ್
ನಿರ್ಗಮಕಾಂಡ 24:16 · ಕನ್ನಡ ಬೈಬಲ್

ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.

Cross references

ನಿರ್ಗಮಕಾಂಡ 16:10

ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.

ನಿರ್ಗಮಕಾಂಡ 19:11

ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.

ನಿರ್ಗಮಕಾಂಡ 20:10

ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.

ನಿರ್ಗಮಕಾಂಡ 24:17

ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.

ಲೇವ್ಯಕಾಂಡ 9:23

ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಅಂಕೆಗಳ ಪುಸ್ತಕ 14:10

ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.

ಅಂಕೆಗಳ ಪುಸ್ತಕ 16:42

ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.

ಕೀರ್ತನೆಗಳು 99:7

ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.

ಯೆಹೆಜ್ಕೇಲ 1:28

ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.

2 ಕೊರಿಂಥದವರಿಗೆ 4:6

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

ಪ್ರಕಟನೆ 1:10

ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.

Interlinear

Choose Theme