ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Cross references
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.