ನಿರ್ಗಮಕಾಂಡ 24:5 · ಕನ್ನಡ ಬೈಬಲ್
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
Cross references
ನಿರ್ಗಮಕಾಂಡ 18:12
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ನಿರ್ಗಮಕಾಂಡ 19:22
ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
ಲೇವ್ಯಕಾಂಡ 1:1
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಲೇವ್ಯಕಾಂಡ 3:1
ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
ಲೇವ್ಯಕಾಂಡ 7:11
ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
ಕೀರ್ತನೆಗಳು 50:5
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.