ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
Cross references
ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.