ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
Cross references
ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.