Home Bibles ನಿರ್ಗಮಕಾಂಡ 25:21 · ಕನ್ನಡ ಬೈಬಲ್
ನಿರ್ಗಮಕಾಂಡ 25:21 · ಕನ್ನಡ ಬೈಬಲ್

ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.

Cross references

ನಿರ್ಗಮಕಾಂಡ 25:16

ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.

ನಿರ್ಗಮಕಾಂಡ 26:34

ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.

ಲೇವ್ಯಕಾಂಡ 16:13

ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.

ದ್ವಿತೀಯೋಪದೇಶಕಾಂಡ 10:5

ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.

1 ಅರಸುಗಳು 8:9

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

Interlinear

Choose Theme