ನಿರ್ಗಮಕಾಂಡ 26:29 · ಕನ್ನಡ ಬೈಬಲ್
ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
Cross references
ನಿರ್ಗಮಕಾಂಡ 25:11
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
1 ಅರಸುಗಳು 6:20
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
1 ಅರಸುಗಳು 6:22
ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.