Home Bibles ನಿರ್ಗಮಕಾಂಡ 26:30 · ಕನ್ನಡ ಬೈಬಲ್
ನಿರ್ಗಮಕಾಂಡ 26:30 · ಕನ್ನಡ ಬೈಬಲ್

ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.

Cross references

ನಿರ್ಗಮಕಾಂಡ 25:9

ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.

ನಿರ್ಗಮಕಾಂಡ 25:40

ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

ನಿರ್ಗಮಕಾಂಡ 27:8

ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.

ನಿರ್ಗಮಕಾಂಡ 40:2

ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.

ನಿರ್ಗಮಕಾಂಡ 40:17

ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

ಅಂಕೆಗಳ ಪುಸ್ತಕ 10:21

ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.

ಯೆಹೋಶುವ 18:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

1 ದಿನವೃತ್ತಾಂತ 28:19

ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.

ಅಪೋಸ್ತಲರ ಕೃತ್ಯಗಳು 7:44

ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

ಹೆಬ್ರಿಯರಿಗೆ 8:2

ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.

ಹೆಬ್ರಿಯರಿಗೆ 8:5

ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ

ಹೆಬ್ರಿಯರಿಗೆ 9:23

ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.

Interlinear

Choose Theme