Home Bibles ನಿರ್ಗಮಕಾಂಡ 26:33 · ಕನ್ನಡ ಬೈಬಲ್
ನಿರ್ಗಮಕಾಂಡ 26:33 · ಕನ್ನಡ ಬೈಬಲ್

ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.

Cross references

ಆದಿಕಾಂಡ 9:4

ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.

ನಿರ್ಗಮಕಾಂಡ 25:16

ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.

ನಿರ್ಗಮಕಾಂಡ 27:10

ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.

ನಿರ್ಗಮಕಾಂಡ 36:36

ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.

ನಿರ್ಗಮಕಾಂಡ 40:21

ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.

ಲೇವ್ಯಕಾಂಡ 16:2

ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.

1 ಅರಸುಗಳು 6:16

ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.

1 ಅರಸುಗಳು 8:6

ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.

1 ಅರಸುಗಳು 8:10

ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.

2 ದಿನವೃತ್ತಾಂತ 5:7

ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.

ಯೆಹೆಜ್ಕೇಲ 41:4

ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.

ಹೆಬ್ರಿಯರಿಗೆ 9:2

ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.

Interlinear

Choose Theme