ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
Cross references
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.