ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
Cross references
ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.