Home Bibles ನಿರ್ಗಮಕಾಂಡ 28:38 · ಕನ್ನಡ ಬೈಬಲ್
ನಿರ್ಗಮಕಾಂಡ 28:38 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.

Cross references

ನಿರ್ಗಮಕಾಂಡ 28:43

ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

ಲೇವ್ಯಕಾಂಡ 1:4

ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.

ಲೇವ್ಯಕಾಂಡ 10:17

ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?

ಲೇವ್ಯಕಾಂಡ 22:9

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಲೇವ್ಯಕಾಂಡ 22:16

ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಲೇವ್ಯಕಾಂಡ 22:27

ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.

ಲೇವ್ಯಕಾಂಡ 23:11

ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.

ಅಂಕೆಗಳ ಪುಸ್ತಕ 18:1

ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಶಾಯ 56:7

ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.

ಯೆಶಾಯ 60:7

ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.

ಯೆಹೆಜ್ಕೇಲ 4:4

ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.

ಯೋಹಾನ 1:29

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಎಫೆಸದವರಿಗೆ 1:6

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

1 ಪೇತ್ರ 2:5

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

Interlinear

Choose Theme