Home Bibles ☰ Books ನಿರ್ಗಮಕಾಂಡ 28:8 · ಕನ್ನಡ ಬೈಬಲ್
ನಿರ್ಗಮಕಾಂಡ 28:8 · ಕನ್ನಡ ಬೈಬಲ್

ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.

Cross references

ನಿರ್ಗಮಕಾಂಡ 28:27

ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.

ನಿರ್ಗಮಕಾಂಡ 29:5

ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ

ನಿರ್ಗಮಕಾಂಡ 39:20

ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.

ಲೇವ್ಯಕಾಂಡ 8:7

ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.

ಯೆಶಾಯ 11:5

ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.

1 ಪೇತ್ರ 1:13

ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

ಪ್ರಕಟನೆ 1:13

ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

Interlinear

Choose Theme